ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿನ ಆಹಾರ ವ್ಯವಸ್ಥೆಗೂ ಯಾವುದೇ ಸಂಬಂಧವಿಲ್ಲ ಎಂದು ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಸ್ಪಷ್ಟಪಡಿಸಿದ್ದಾರೆ. ಸಮ್ಮೇಳನದಲ್ಲಿ ಬಾಡೂಟ ಹಾಕಿಸಬೇಕು ಎಂಬ ಬೇಡಿಕೆಗಳಿಗೆ ಸೋಮವಾರ ಪ್ರತಿಕ್ರಿಯಿಸಿರುವ ಅವರು, ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಅಧ್ಯಕ್ಷತೆಯಲ್ಲಿ 35 ಜನರ ‘ಆಹಾರ ಸಮಿತಿ’ಯನ್ನು ರಚಿಸಲಾಗಿದೆ. ಊಟೋಪಚಾರಗಳ ವ್ಯವಸ್ಥೆಯನ್ನು ಈ ಸಮಿತಿ ನಿರ್ವಹಿಸುತ್ತದೆ. ಡಿ.6ರಂದು ಈ ಸಮಿತಿ ಸಭೆ ಸೇರಿ ಸಮ್ಮೇಳನದಲ್ಲಿ ಮುದ್ದೆ, ಸೊಪ್ಪು ಸಾಂಬಾರ್ ವಿಶೇಷ ತಿನಿಸಾಗಿದ್ದು, ಉತ್ತರ, ದಕ್ಷಿಣ ಕರ್ನಾಟಕ ಶೈಲಿಯ ಊಟವನ್ನು 300 ಕೌಂಟರ್‌ಗಳಲ್ಲಿ ವ್ಯವಸ್ಥೆ ಮಾಡುವುದು ಸೇರಿದಂತೆ ಅನೇಕ ನಿರ್ಣಯಗಳನ್ನು ತೆಗೆದುಕೊಂಡಿದೆ. ಈ ಸಭೆಯಲ್ಲಿ ನಾನು ಭಾಗವಹಿಸಿರಲಿಲ್ಲ ಎಂದಿದ್ದಾರೆ.