Home » ನೇಮಕಾತಿ ಭ್ರಷ್ಟಾಚಾರ ತಡೆಗೆ ಎ ಐ
 

ನೇಮಕಾತಿ ಭ್ರಷ್ಟಾಚಾರ ತಡೆಗೆ ಎ ಐ

ಸಿ ಎಂ ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು :  ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಮತ್ತಿತರ ಕಾರಣಗಳಿಂದಾಗಿ ರಾಜ್ಯ ಲೋಕಸೇವಾ ಆಯೋಗಗಳ ಮೇಲಿನ ವಿಶ್ವಾಸಾರ್ಹತೆ ಕುಸಿಯುತ್ತಿದ್ದು, ಅದನ್ನು ಮರುಸ್ಥಾಪಿಸಲು ದೃಢ ಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಹಾಗೂ ಕೃತಕ ಬುದ್ಧಿ ಮತ್ತೆ ಸೇರಿ ಇನ್ನಿತರ ಆಧುನಿಕ ತಂತ್ರಜ್ಞಾನ ಬಳಸಿ ನೇಮಕಾತಿ ಪ್ರಕ್ರಿಯೆಯನ್ನು ಭ್ರಷ್ಟಾಚಾರ ರಹಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯ ” ಲೋಕಸೇವಾ ಆಯೋಗ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ 25ನೇ ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ ಸಮ್ಮೇಳನದಲ್ಲಿ ಮಾತನಾಡಿ, ಜನಕೇಂದ್ರಿತವಾಗಿದ್ದುಕೊಂಡು ಭವಿಷ್ಯದ ಸವಾಲುಗಳನ್ನು ಎದುರಿಸುವಂತಹ ಆಡಳಿತ ವೈಖರಿಯನ್ನು ಲೋಕಸೇವಾ ಆಯೋಗ ಅಳವಡಿಸಿಕೊಳ್ಳ ಬೇಕು. ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಗುಣಮಟ್ಟದ ಸೇವೆಗೆ ತರಬೇತಿ ನೀಡುವುದು ಅವಶ್ಯ ಎಂದರು.

ಲೋಕಸೇವಾ ಆಯೋಗದ ಮೂಲಕ ಮಾಡಲಾಗುವ ನೇಮಕಾತಿ ಪ್ರಕ್ರಿಯೆ ಪಾರದರ್ಶಕ ಮತ್ತು ಭ್ರಷ್ಟಾಚಾರ ರಹಿತ ವಾಗಿರಬೇಕಿದೆ. ಅದಕ್ಕಾಗಿ ಬೇರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಲಾಗುವುದು ಎಂದರು

 

Related Articles

error: Content is protected !!