ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ, ಎಲ್ಕೆಜಿ ಹಾಗೂ ಯುಕೆಜಿ ಆರಂಭಿಸಲು ಸಮಿತಿಯನ್ನು ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ(ಎಲ್ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಸಚಿವೆ ಹೆಬ್ಬಾಳ್ಳರ್ ತಿಳಿಸಿದರು