85
ಬೆಂಗಳೂರು: ಮುಂಬರುವ ಅಕ್ಟೋಬರ್‌ತಿಂಗಳಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಆಯೋಜಿಸಲು ತೀರ್ಮಾನಿಸಲಾಗಿದೆ. ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸುವರ್ಣ ಮಹೋತ್ಸವವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು ಎಂದರು.

