Home » ಸಂಭಾವನೆ ಇಲ್ಲದೆ ಅನಿಲ್‌ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ
 

ಸಂಭಾವನೆ ಇಲ್ಲದೆ ಅನಿಲ್‌ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ

by Kundapur Xpress
Spread the love

ಬೆಂಗಳೂರು : ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ನಾಮ ನಿರ್ದೇಶನಗೊಳಿ ಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿರುವ ಅನಿಲ್ ಕುಂಬ್ಳೆ ಅವರು ವಿಶ್ವಾದ್ಯಂತ ಖ್ಯಾತಿ ಹೊಂದಿದ್ದಾರೆ.

ಅರಣ್ಯ, ವನ್ಯಜೀವಿ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಈ ಕಾರ್ಯಕ್ಕೆ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

 

Related Articles

error: Content is protected !!