ಬೆಂಗಳೂರು : ತಮ್ಮ ಕಂಚಿನ ಕಂಠದಿಂದ ಮನೆಮಾತಾಗಿದ್ದ ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ (58ವರ್ಷ) ಇಹಲೋಕ ತ್ಯಜಿಸಿದ್ದಾರೆ
ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದ ಹಿನ್ನೆಲೆ ಯಲ್ಲಿ ಮನೆಗೆ ಮರಳಿದ್ದ ಅವರು ತಮ್ಮ ಬನಶಂಕರಿಯ ನಿವಾಸದಲ್ಲಿ ಕೊನೆಯುಸಿರೆಳೆದರು.
ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು, ಚಿತ್ರರಂಗ ಹಾಗೂ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಬನಿ ಮಿಡಿದಿದ್ದಾರೆ.