81
ಬೆಂಗಳೂರು : ವಿಧಾನಪರಿಷತ್ ಸದಸ್ಯರ ಮನವಿಗಳಿಗೆ ಸ್ಪಂದಿಸುವಂತೆ ಹಾಗೂ ಪರಿಷತ್ ಸದಸ್ಯರ ಕೆಲಸಗಳಿಗೆ ಆದ್ಯತೆ ನೀಡುವಂತೆ ಸಚಿವರಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪರಿಷತ್ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ಬುಧವಾರ ಸಂಜೆ ಕಾಂಗ್ರೆಸ್‌ನ ಪರಿಷತ್ ಸದಸ್ಯರು ಏರ್ಪಡಿಸಿದ್ದ ಔತಣ ಕೂಟದಲ್ಲಿ ಭಾಗವ ಹಿಸಿದ್ದ ಸಿದ್ದರಾಮಯ್ಯ ಅವರಿಗೆ ಪರಿಷತ್ ಸದಸ್ಯರು ಮನವಿ ಮಾಡಿದರು. ಸಚಿವರು ಪರಿಷತ್ ಸದಸ್ಯರ ಬಗ್ಗೆ ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಮನವಿ ಗಳಿಗೆ ಸ್ಪಂದಿಸುತ್ತಿಲ್ಲ. ಸಚಿವರಿಗೆ ಪಕ್ಷದ ಶಾಸಕರು, ಪರಿಷತ್ ಸದಸ್ಯರ ಸಮಸ್ಯೆಗಳನ್ನು ಆಲಿಸಲು ಸೂಚನೆ ನೀಡಬೇಕು. ವಿಧಾನಪರಿಷತ್ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲ ಸಚಿವರು ಮಾಡಬೇಕು. ಈ ಬಗ್ಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.

