36
ಗಂಗಾವತಿ : ಮೈಕ್ರೋ ಫೈನಾನ್ಸ್ ಮತ್ತು ಖಾಸಗಿ ಬ್ಯಾಂಕ್ ನೌಕರರು ಸಾಲ ಪಾವತಿಗಾಗಿ ಕಿರುಕುಳ ನೀಡಿದ್ದಕ್ಕೆ ಬೇಸತ್ತು ಅಂಗನವಾಡಿ ಕಾರ್ಯಕರ್ತೆ, ಅಂಗವಿಕಲೆ ಮಂಜುಳಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಅಗಡಿ ಸಂಗಣ್ಣ ಕ್ಯಾಂಪ್‌ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ
ನಗರದ ಖಾಸಗಿ ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಕಂಪನಿ ಮತ್ತು ಖಾಸಗಿಯಾಗಿ 23 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು. ಸಾಲ ನೀಡಿದ ಮಹಿಳೆಯೊಬ್ಬರು ಮಂಜುಳಾ ಅವರಿಗೆ ಕಿರುಕುಳ ನೀಡಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ಬೈದಿದ್ದರು ಎನ್ನಲಾಗಿದೆ. ಅಲ್ಲದೆ ಮೈಕ್ರೋ ಫೈನಾನ್ಸ್ ನವರು ಸಹ ಮನೆಗೆ ಬೀಗ ಹಾಕಿ ಮನೆಯಿಂದ ಹೊರ ಹಾಕುವುದಾಗಿ ಬೆದರಿಸಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ತೀವ್ರ ಅಸ್ವಸ್ಥರಾಗಿರುವ ಮಂಜುಳಾ ಅವರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಾಸಿದ್ದು, ಚಿಕಿತ್ಸೆ ಮುಂದುವರಿದಿದೆ.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)