Home » ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ
 

ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ

ಬಿ ಎಸ್‌ ಯಡಿಯೂರಪ್ಪ

by Kundapur Xpress
Spread the love

ರಾಮನಗರ : ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು.ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್‌ಗೆ ಕಿಂಚಿತ್ತು ಜವಾಬ್ದಾರಿ ಇದ್ದರೆ ತಕ್ಷಣವೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲವೇ ಪಾದಯಾತ್ರೆಗೆ ಜನರ ಬೆಂಬಲವನ್ನು ನೋಡಿ ಸ್ವತಃ ಸಿದ್ದರಾಮಯ್ಯ ಸ್ಥಾನ ತೊರೆಯಬೇಕು ಎಂದು ಒತ್ತಾಯಿಸಿದರು.

   

Related Articles

error: Content is protected !!