ಬೆಂಗಳೂರು : ವಕ್ಸ್ ಹೋರಾಟ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತ್ಯೇಕ ಹೋರಾಟ ಕುರಿತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇದೇ ಮೊದಲ ಬಾರಿಗೆ ಬಹಿರಂಗ ವಾಗಿ ಅಸಮಾಧಾನ ಹೊರಹಾಕಿದ್ದಾರೆ. ಸ್ವಪ್ರತಿಷ್ಠೆಗಾಗಿ ನಡೆಸುತ್ತಿರುವ ಹೋರಾಟ ಶಾಸಕ ಯತ್ನಾಳ ಅವರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೋರಾಟ ಕೈಬಿಟ್ಟು ನಮ್ಮ ಜತೆ ಸೇರಿ ಕೆಲಸ ಮಾಡುವಂತೆ ಶಾಸಕ ಬಸನ ಗೌಡ ಯತ್ನಾಳ್ಗೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಸ್ವಪ್ರತಿಷ್ಠೆಯಿಂದ ವಕ್ಸ್ ಹೋರಾಟ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರಲ್ಲ. ಇನ್ನಾದರೂ ಅವರು ಜಾಗೃತ ರಾಗಿ ಒಟ್ಟಾಗಿ ಪಕ್ಷ ಬಲಪಡಿಸಲು ಸಹಕಾರ ನೀಡಬೇಕು ಎಂದು ಸೂಚನೆ ನೀಡಿದರು.