136
ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಪುನರುಚ್ಚರಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪರಸ್ಪರ ಕಚ್ಚಾಡುವುದರಿಂದ ಯಾರಿಗೂ ಲಾಭ ಇಲ್ಲ. ಈ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಹೋರಾಟ ಮಾಡಬೇಕು. ಈ ನಿಟ್ಟಿನಲ್ಲಿ ಮುನ್ನಡೆಯುವ ವಿಶ್ವಾಸ ನಮ್ಮೆಲ್ಲ ರಿಗೂ ಇದೆ ಎಂದರು. ಸಿಎಂ ವಿರುದ್ಧ ಇ.ಡಿ. ತನಿಖೆ ಬಗ್ಗೆ ಮಾತನಾಡಿದ ಬಿಎಸ್‌ವೈ, ಇ.ಡಿ.ಗೆ ಪೂರ್ತಿ ಅಧಿಕಾರ ಇದೆ. ಇ.ಡಿ. ಏನು ತೀರ್ಮಾನತೆಗೆದು ಕೊಳ್ಳುತ್ತದೆ ಅದೇ ಅಂತಿಮ, ಸಿಎಂ ವಿರುದ್ಧ ಸಾಕ್ಷ್ಯಾಧಾರಗಳು ಸಿಕ್ಕಿವೆ. ಅದಕ್ಕೆ ಈ ರೀತಿ ಹೇಳಿಕೆ ಕೊಡು ತ್ತಿದ್ದಾರೆ. ಸಿಎಂ ಆಗಿ ಇ.ಡಿ.ಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದರು.

