85
ಬೆಂಗಳೂರು : ನಿರಂತರವಾಗಿ ಬೆಲೆ ಏರಿಕೆ ಮಾಡುತ್ತ ಬಂದಿದ್ದೀರಿ, ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಹಿಂದು ಕಾರ್ಯಕರ್ತರ ಹತ್ಯೆ ಸತತವಾಗಿ ಮುಂದುವರಿದಿದೆ. ಯಾವ ಪುರುಷಾರ್ಥಕ್ಕೆ ನೀವು ಸಾಧನಾ ಸಮಾವೇಶ ಮಾಡುತ್ತಿದ್ದೀರಿ ಮುಖ್ಯಮಂತ್ರಿಗಳೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು.
ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಮಂಗಳವಾರ ಎರಡು ವರ್ಷಗಳ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಯಾವುದೇ ಹೊಸ ಯೋಜನೆ ನೀಡಲು ಸಾಧ್ಯವಾ ಗಿಲ್ಲ. ಮಹಿಳೆಯರಿಗೆ ಯಾವುದೇ ಅಭಿವೃದ್ಧಿ ಯೋಜನೆ ಪ್ರಕಟಿಸಿಲ್ಲ; ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿ ಸ್ವಾಭಿಮಾನದ ಬದುಕನ್ನು ನೀಡಿಲ್ಲ ಎಂದು ಆರೋಪಿಸಿದರು

