84
ಬೆಂಗಳೂರು : ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಶೀಘ್ರದಲ್ಲೇ ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಇನ್ನೂ ನೇಮಕಾತಿ ಆಗುತ್ತಿಲ್ಲ ಗೊಂದಲಗಳಿದ್ದು ಮುಂದೂಡುತ್ತಿದ್ದಾರೆ ಎಂಬುದು ಯಾವುದೂ ಸತ್ಯವಲ್ಲ. ಈಗ ದೇಶದ 14 ರಾಜ್ಯಗಳ ಅಧ್ಯಕ್ಷರ ಆಯ್ಕೆ ಮುಗಿದಿದೆ. ಈ ವಿಚಾರದಲ್ಲಿ ಘೋಷಣೆಯೂ ಆಗಿದೆ. ಸದ್ಯವೇ, ಇನ್ನು ಆರೇಳು ರಾಜ್ಯಗಳ ಅಧ್ಯಕ್ಷರ ಘೋಷಣೆ ಆಗಲಿದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಅದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಘೋಷಣೆ ಆಗಲಿದೆ ಎಂದರು.

