133
ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.
ಈ ವೇಳೆ ಮಾತನಾಡಿ, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ, 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದೆ. ಇದು ನನ್ನಲ್ಲಿ ಪುನೀತ ಭಾವ ಮೂಡಿಸಿತು. ಋಷಿ-ಮುನಿಗಳ ಆಶೀರ್ವಾದ ನವ ಚೈತನ್ಯ ಮೂಡಿಸಿತು ಎಂದು ಹೇಳಿದರು.

