Home » ಬಾಬಾ ಬುಡನ್‌ಗಿರಿಗೆ ಪ್ರವೇಶ ನಿರ್ಬಂಧ
 

ಬಾಬಾ ಬುಡನ್‌ಗಿರಿಗೆ ಪ್ರವೇಶ ನಿರ್ಬಂಧ

by Kundapur Xpress
Spread the love

 ಚಿಕ್ಕಮಗಳೂರು : ಚಿಕ್ಕಮಗಳೂರಿನ ಪ್ರಸಿದ್ದ ಬಾಬಾ ಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಕಾರಣದಿಂದ ಡಿ.12ರಿಂದ 15ರವರೆಗೆ ಪ್ರವಾಸಿಗರಿಗೆ ಗಿರಿ ಪ್ರದೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಬಾಬಾಬುಡನ್ ಗಿರಿಗೆ ತೆರಳುವ ರಸ್ತೆ ತುಂಬಾ ಕಿರಿದಾಗಿದ್ದು, ಪ್ರಸಕ್ತ ವರ್ಷದಲ್ಲಿ ಸುರಿದ ಮಳೆಯಿಂದ ರಸ್ತೆಗಳು ಹಾಳಾಗಿದ್ದು, ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ತಾಣಗಳಿಗೆ ಪ್ರವಾಸಿಗರನ್ನು ದತ್ತ ಜಯಂತಿಯ ಸಂದರ್ಭದಲ್ಲಿ ನಿರ್ಬಂಧಿಸುತ್ತಿರುವುದಾಗಿ ತಿಳಿಸಿದ್ದಾರೆ.

ಬಾಬಾ ಬುಡನ್ ಗಿರಿಯಲ್ಲಿ ದತ್ತಮಾಲಾಧಾರಿಗಳು, ಸುತ್ತಮುತ್ತಲಿನ ವ್ಯಾಪ್ತಿಯ ಸ್ಥಳೀಯರು ಹಾಗೂ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಮಾಡುವವರು ಮತ್ತು ಈ ಸ್ಥಳಗಳಲ್ಲಿ ಈಗಾಗಲೇ ಹೋಮ್ ಸ್ಟೇ. ರೆಸಾರ್ಟ್ ಬುಕ್ಕಿಂಗ್ ಮಾಡಿಕೊಂಡವರಿಗೆ ಮಾತ್ರವೇ ಗಿರಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದರ ಹೊರತಾಗಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ಹೇಳಿದ್ದಾರೆ.

 

Related Articles

error: Content is protected !!