Home » ಭವಾನಿ ರೇವಣ್ಣಗೆ ಜಾಮೀನು
 

ಭವಾನಿ ರೇವಣ್ಣಗೆ ಜಾಮೀನು

by Kundapur Xpress
Spread the love

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಿಸಿದ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರಿಗೆ ಜೂ.7 ರಂದು ನೀಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅನ್ನು ಕಾಯಂಗೊಳಿಸಿದೆ. ಈ ಕುರಿತು ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನ್ಯಾಯಪೀಠ ಮಂಗಳವಾರ ಅಂತಿಮ ತೀರ್ಪು ನೀಡಿದೆ. ಮಧ್ಯಂತರ ಜಾಮೀನು ನೀಡುವ ವೇಳೆ ವಿಧಿಸಿದ್ದ ಷರತ್ತುಗಳನ್ನು ಅಂತಿಮ ಆದೇಶದಲ್ಲೂ ನ್ಯಾಯಪೀಠ ಮುಂದುವರಿಸಿದೆ ಎಂದು ತಿಳಿದುಬಂದಿದೆ

   

Related Articles

error: Content is protected !!