ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ, ಮ್ಯಾನೇಜರ್ ಆರ್.ನಾಗರಾಜು, ದರ್ಶನ್ ಕಾರು ಚಾಲಕ ಎಂ.ಲಕ್ಷ್ಮಣ್, ಆಪ್ತರಾದ ಅನುಕುಮಾರ್, ಜಗದೀಶ್ ಮತ್ತು ಪ್ರದೋಷ್ ಎಸ್. ರಾವ್ ಅವರ ಜಾಮೀನು ಅರ್ಜಿ ಗಳನ್ನು ಪುರಸ್ಕರಿಸಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಶುಕ್ರವಾರ ತೀರ್ಪು ನೀಡಿತು.
ಅರ್ಜಿದಾರ ಆರೋಪಿಗಳು ತಲಾ ಒಂದು ಲಕ್ಷ ರು. ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತಾ ಖಾತರಿ ನೀಡಬೇಕು. ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ನಿಯಮಿತವಾಗಿ ಹಾಜರಾಗಬೇಕು. ಸಮಂಜಸ ಕಾರಣಗಳಿಲ್ಲದೆ ಹಾಗೂ ವಿಚಾರಣಾ ನ್ಯಾಯಾಲಯದ ಅನುಮತಿಯಿಲ್ಲದೆ ವಿಚಾರಣೆಗೆ ಗೈರಾಗುವಂತಿಲ್ಲ
ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರಾಸಿ ಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕುವಂತಿಲ್ಲ ಸಾಕ್ಷ್ಯಾಧಾರಗಳನ್ನು ತಿರುಚುವುದಕ್ಕೆ ಯತ್ನಿಸಬಾರದು ಹಾಗೂ ಇಂತಹದ್ದೇ ಕೃತ್ಯದಲ್ಲಿ ಭಾಗಿಯಾಗಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ