Home » ಅ.31- ಪವಿತ್ರಾ ಗೌಡ ಜಾಮೀನು ಅರ್ಜಿ ತೀರ್ಪು
 

ಅ.31- ಪವಿತ್ರಾ ಗೌಡ ಜಾಮೀನು ಅರ್ಜಿ ತೀರ್ಪು

by Kundapur Xpress
Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿಯ ಅಪಹರಣ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣ ಗೆರೆ ವಿನಯ್ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಪ್ರಕಟಿಸಲಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಈ ನಾಲ್ವರು ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ಸಂಬಂಧ ಬುಧವಾರ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಜೈಶಂಕರ್ ತೀರ್ಪು ಕಾಯ್ದಿರಿಸಿದ್ದಾರೆ. ಜಾಮೀನು ಅರ್ಜಿಗಳಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ತನಿಖಾಧಿಕಾರಿಗಳ ಪರ ಎಸ್‌ಪಿಪಿ ಪಿ.ಪ್ರಸನ್ನಕುಮಾರ್‌ ಅವರು, ರೇವಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಪಟ್ಟಣಗೆರೆ ಶೆಡ್‌ಗೆ ಕರೆತಂದು ಕೊಲೆ ಮಾಡುವವರೆಗೂ ನಡೆದಿರುವ ಎಲ್ಲ ಬೆಳವಣಿಗೆಗಳ ಕುರಿತು ಕೋರ್ಟ್‌ಗೆ ಮಾಹಿತಿ ನೀಡಿದರು. ಆರೋಪಿಗಳ ಪರ ವಕೀಲರು, ಅರ್ಜಿದಾರರು ಪ್ರಕರಣ ಸಂಚಿನಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ಧದ ಸಾಕ್ಷ್ಯಾಧಾರಗಳು ಇಲ್ಲವಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು.

   

Related Articles

error: Content is protected !!