ಬೆಂಗಳೂರು : ದುಬೈನಿಂದ ಬೆಂಗಳೂರಿಗೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್‌ಗೆ ನಗರದ 61ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ರನ್ಯಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಅಂತರ್ ರಾಷ್ಟ್ರೀಯ ಸಂಪರ್ಕಗಳು ಇದೆ. ಒಂದು ವರ್ಷದ ಅವಧಿ ಯಲ್ಲಿ 27 ಬಾರಿ ವಿದೇಶಿ ಪ್ರಯಾಣ ಮಾಡಿ ದ್ದಾರೆ. ರನ್ಯಾ ಅವರಿಂದ 4.83 ಕೋಟಿ ರು. ಸುಂಕ ವಂಚನೆಯಾಗಿದೆ ಎಂದು ಡಿಐಆರ್ ತನಿಖಾಧಿಕಾರಿಗಳು ಬಲವಾಗಿ ವಾದಿಸಿದ್ದಾರೆ.
ಆರೋಪಿ ಮೇಲಿನ ಆರೋಪಗಳು ಗಂಭೀರ ಸ್ವರೂಪದಲ್ಲಿವೆ. ಜಾಮೀನು ಮೇಲೆ ಬಿಡು ಗಡೆಯಾದರೆ ಸಾಕ್ಷ್ಯ ನಾಶಕ್ಕೆ ಯತ್ನಿಸುವ, ದೇಶ ಬಿಟ್ಟು ಪರಾರಿಯಾಗುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಇದರಿಂದ ತನಿಖೆ ಹಾದಿ ತಪ್ಪಬಹುದು. ಹಾಗಾಗಿ, ಜಾಮೀನು ನೀಡಲಾಗದು ಎಂದು ಆದೇಶದಲ್ಲಿ ತಿಳಿಸಿದೆ.
ವಿಸ್ತ್ರತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಹಿಂದೆ ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾ ಲಯ (ಮ್ಯಾಜಿಸ್ಟ್ರೇಟ್) ರನ್ಯಾಗೆ ಜಾಮೀನು ನಿರಾಕರಿಸಿತ್ತು. ಇದೀಗ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದೆ.

