94
ಬೆಂಗಳೂರು : ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶದ ವಿವಿಧ ನಗರಗಳಿಗೆ ಶುಕ್ರವಾರ ನೀಡಬೇಕಿದ್ದ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಿದೆ.
ಜಮ್ಮು ಶ್ರೀನಗರ, ಧರ್ಮಶಾಲಾ ಸೇರಿದಂತೆ 10ಕ್ಕೂ ಹೆಚ್ಚಿನ ನಗರಗಳಿಗೆ ವಿಮಾನ ಸೇವೆ ರದ್ದು ಮಾಡಲಾಗಿದೆ. ಶುಕ್ರವಾರ 50ಕ್ಕೂ ಹೆಚ್ಚಿನ ವಿಮಾನಗಳ ಸೇವೆಯಲ್ಲಿ ವ್ಯತ್ಯಯವಾಗುವಂತಾಗಿತ್ತು. ಮೇ 10ರವರೆಗೆ ಭದ್ರತಾ ದೃಷ್ಟಿಯಿಂದಾಗಿ ಸಾಕಷ್ಟು ಬದಲಾವಣೆಗಳಾಗಲಿದೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಕಲಬುರಗಿ ಮುಂತಾದ ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ಕಟ್ಟುನಿಟ್ಟಿನ ತಪಾಸಣೆ ನಡೆಸಾಗುತ್ತಿದೆ. ಕರ್ನಾಟಕ ಕೈಗಾರಿಕೆ ಭದ್ರತಾ ಪಡೆಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲೂ ಭದ್ರತೆ ಹೆಚ್ಚಿಸಲಾಗಿದೆ.

