160
ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತ ಅಮಾನತುಗೊಂಡಿದ್ದಾರೆ. ಆರ್‌ಸಿಬಿ ವಿಜಯೋತ್ಸವ ವೇಳೆ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ವಾಗಿ 11 ಮಂದಿ ಮೃತರಾದ ದುರಂತದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ ಸೇರಿ ಐವರು ಪೊಲೀಸ್ ಅಧಿಕಾರಿಗಳು ಅಮಾನತುಗೊಳಿಸಿದೆ
ನಗರ ಪೊಲೀಸ್ ಘಟಕದ ಇತಿಹಾಸದಲ್ಲಿ ಪ್ರಕರಣವೊಂದರಲ್ಲಿ ನಗರ ಪೊಲೀಸ್ ಆಯುಕ್ತರು ಅಮಾನತು ಶಿಕ್ಷೆಗೆ ಗುರಿಯಾಗಿರುವುದು ಇದೇ ಮೊದಲು ಎನ್ನಲಾಗಿದೆ. ಈ ಹಿಂದೆ ಕೆಲ ಪ್ರಕರಣಗಳಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಎಸಿಪಿಗಳು ಅಮಾನತು ಶಿಕ್ಷೆಗೆ ಗುರಿಯಾಗಿರುವ ನಿದರ್ಶನಗಳಿವೆ. ಆದರೆ, ನಗರ ಪೊಲೀಸ್ ‘ಆಯುಕ್ತ ಅಮಾನತಾದ ನಿದರ್ಶನಗಳು ಇರಲಿಲ್ಲ. ಇದೀಗ ಬಿ.ದಯಾನಂದ ಮೊದಲಿಗರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

