Home » ಜನಕ್ಕೆ ಸತ್ಯ ತಿಳಿಸುವುದೇ ಪಾದಯಾತ್ರೆ ಉದ್ದೇಶ
 

ಜನಕ್ಕೆ ಸತ್ಯ ತಿಳಿಸುವುದೇ ಪಾದಯಾತ್ರೆ ಉದ್ದೇಶ

: ಸಿ.ಟಿ.ರವಿ

by Kundapur Xpress
Spread the love

ಬೆಂಗಳೂರು : ರಾಜ್ಯದ ಜನರಿಗೆ ಸತ್ಯವನ್ನು ಹೇಳುವುದೇ ಮೈಸೂರು ಚಲೋ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

ಸೋಮವಾರ ನಗರದಲ್ಲಿ ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಎನ್‌ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದರು.

ವಿವಿಧ ಹಗರಣಗಳ ಕುರಿತು ಕಾಂಗ್ರೆಸ್ ಸರ್ಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಸರ್ಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು ಎಂದು ವಿಶ್ಲೇಷಿಸಿದರು.

ಮುಡಾ ಹಗರಣ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ’ ಸೇರಿ ಎಲ್ಲ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.

   

Related Articles

error: Content is protected !!