ನವದೆಹಲಿ : ಮುಡಾ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ ಆಯೋಜಿಸಿರುವ ಪಾದಯಾತ್ರೆಯಿಂದ ದೂರವುಳಿಯಲು ನಿರ್ಧರಿಸಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೊನೆಗೂ ತಮ್ಮ ನಿಲುವು ಬದಲಿಸಿದ್ದಾರೆ.
ಬಿಜೆಪಿ ವರಿಷ್ಠರ ಮನವೊಲಿಕೆ ಬಳಿಕ ಮುನಿಸು ಮರೆತು ಎಂಟು ದಿನಗಳ ಈ ಪಾದಯಾತ್ರೆಗೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಅದರಂತೆ ಪೂರ್ವನಿಗದಿಯಂತೆ ಜೆಡಿಎಸ್-ಬಿಜೆಪಿ ಜಂಟಿ ನೇತೃತ್ವದಲ್ಲಿ ಶನಿವಾರ ಪಾದಯಾತ್ರೆ ಆರಂಭವಾಗಲಿದೆ