ಬೆಳಗಾವಿ : ವಿಧಾನಮಂಡಲದ ಚಳಿಗಾಲದ 11ನೇ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, 10 ದಿನಗಳ ಅಧಿವೇಶನದಲ್ಲಿ ವಕ್ಸ್, ಬಾಣಂತಿಯರ ಸಾವು, ಇತ್ಯಾದಿ ಗಳನ್ನಿಟ್ಟುಕೊಂಡು ಸರ್ಕಾರ ದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ
ಕೊರೋನಾ ಹಗರಣ ಕುರಿತ ಕುನ್ಹಾ ವರದಿ, ಬಿಜೆಪಿ ಹಗರಣಗಳು, ಬಿಎಸ್‌ವೈ ಲೈಂಗಿಕ ದೌರ್ಜ ನ್ಯದಂಥ ಪ್ರಕರಣ ಪ್ರಸ್ತಾಪಿಸಿ ತಿರುಗಿಬೀಳಲು ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಸದನ ಕದನ ಕುತೂಹಲ ಕೆರಳಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಿರೀಕ್ಷಿಸಲಾಗಿದೆ ಇಂದು ಕುಂದಾ ನಗರಿಯ ಸುವರ್ಣಸೌಧದಲ್ಲಿ ಬೆಳಗ್ಗೆ 11.00 ಗಂಟೆಗೆ ಅಧಿವೇಶನ ವಿದ್ಯುಕ್ತವಾಗಿ ಆರಂಭವಾಗಲಿದೆ