Home » ಭುವನೇಶ್ವರೀ ಕಂಚಿನ ಪ್ರತಿಮೆ ಅನಾವರಣ
 

ಭುವನೇಶ್ವರೀ ಕಂಚಿನ ಪ್ರತಿಮೆ ಅನಾವರಣ

ಸಿಎಂ, ಡಿಸಿಎಂ ಭಾಗಿ

by Kundapur Xpress
Spread the love

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನೆರವೇರಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿಯ ಪ್ರತಿಮೆ ಅನಾವರಣಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಕ್ತಿ ಕೇಂದ್ರದ ಆವರಣದಲ್ಲಿ ಭುವನೇಶ್ವರಿಪ್ರತಿಮೆ ಅನಾವರಣಗೊಂಡು ಸ್ಥಿರವಾಗಿ ಸ್ಥಾಪನೆಯಾಗಿರುವುದು ಎಲ್ಲ ಕನ್ನಡಿಗರಿಗೆ ಹೆಮ್ಮೆಯ ದಿನ. ಕನ್ನಡ ಭಾಷೆ, ಸಂಸ್ಕೃತಿ, ಕಲೆಯ ಕುರಿತು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿ ಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮಲ್ಲರ ಅಭಿಮಾನವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ ಭಾಷೆಯಾಗುತ್ತದೆ. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಾಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದರು.

ಇತರೆ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾ ಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಕನ್ನಡ ಕಲಿಯುವುದು ಅನಿವಾರ್ಯ ಎಂಬಂತಹ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಕನ್ನಡಿಗರು ಮಾತೃಭಾಷೆಗೆ ಪ್ರಧಾನ ಸ್ಥಾನ ನೀಡಬೇಕೆಂದರು. ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಮಾತನಾಡಿ, ಬೇರೆ ಯಾವ ರಾಜ್ಯ ದಲ್ಲೂ ಪ್ರತ್ಯೇಕ ಧ್ವಜ, ನಾಡಗೀತೆ ಇಲ್ಲ. ಕರ್ನಾ ಟಕದಲ್ಲಿ ಮಾತ್ರ ಕನ್ನಡ ಧ್ವಜ, ನಾಡಗೀತೆ ಇದೆ.ಇದು ನಮ್ಮ ಹೆಮ್ಮೆ ಎಂದು ಹೇಳಿದರು.

 

Related Articles

error: Content is protected !!