Home » ಅನರ್ಹತೆ ಬಗ್ಗೆ ಬಿಜೆಪಿ ಸಭೆಯಲ್ಲಿ ನಿರ್ಧಾರ
 

ಅನರ್ಹತೆ ಬಗ್ಗೆ ಬಿಜೆಪಿ ಸಭೆಯಲ್ಲಿ ನಿರ್ಧಾರ

ಹೆಬ್ಬಾರ್ ಮತ್ತು ಸೋಮಶೇಖರ್

by Kundapur Xpress
Spread the love

ಬೆಂಗಳೂರು : ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ.

ಕೋರ್‌ ಕಮಿಟಿ ಸಭೆ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ‘ಬಿಜೆಪಿ ಚಿಹ್ನೆಯಡಿ ಗೆದ್ದ ಶಾಸಕರಾದ ಎಸ್.ಟಿ.ಸೋಮಶೇಖ‌ರ್ ಮತ್ತು ಶಿವರಾಮ ಹೆಬ್ಬಾರ್‌ ಅವರು ಕಳೆದ ಹಲವು ತಿಂಗಳಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾಂಗ್ರೆಸ್ ಜೊತೆ ಅಧಿಕೃತವಾಗಿ ಗುರುತಿಸಿಕೊಂಡಿದ್ದಾರೆ. ಈ ಇಬ್ಬರು ಶಾಸಕರ ವಿಚಾರವನ್ನು ಬಹಳ ಹಿಂದೆಯೂ ಚರ್ಚಿ ಸಲಾಗಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕಲು ಹಾಗೂ ಬಿಗಿ ಕ್ರಮ ಕೈಗೊಳ್ಳಲು ಕೋರ್‌ಕಮಿಟಿ ಸರ್ವಾನುಮತದಿಂದ ಕೋರಿದೆ. ಈ ವಿಚಾರವನ್ನು ರಾಷ್ಟ್ರೀಯ ಅಧ್ಯಕ್ಷರ ಮತ್ತು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದು ಇತ್ಯರ್ಥಗೊಳಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

 

Related Articles

error: Content is protected !!