ಬೆಂಗಳೂರು :ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ನಿವೇಶನ ಹಂಚಿಕೆ ಹಗರಣ, ದಲಿತರ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಿದ್ದನ್ನು ಖಂಡಿಸಿ ಬರುವ ಆಗಸ್ಟ್ 3 ರಿಂದ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಳ್ಳಲು ತೀರ್ಮಾನಿಸಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಹಗರಣ, ಮುಡಾ ಅಕ್ರಮ ಒಟ್ಟು ಏಳು ದಿನಗಳ ಪಾದಯಾತ್ರೆ ಇದು ಎಂಟನೇ ದಿನ ಅಂದರೆ, ಆಗಸ್ಟ್ 10 ರಂದು ಮೈಸೂರಿನಲ್ಲಿ ಬೃಹತ್ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ
ಭಾನುವಾರ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯ ನಾಯಕರ ಸಮನ್ವಯ ಸಭೆಯಲ್ಲಿ ‘ಪಾದಯಾತ್ರೆ ಬಗ್ಗೆ ವಿಸ್ತ್ರತ ಚರ್ಚೆ ನಡೆಸಿದ ಬಳಿಕ ದಿನಾಂಕ ಅಂತಿಮಗೊಳಿಸಲಾಯಿತು.