Home » ಸರ್ಕಾರದ ವಿರುದ್ದ ಬಿಜೆಪಿ – ಜೆಡಿಎಸ್‌ ಪ್ರತಿಭಟನೆ
 

ಸರ್ಕಾರದ ವಿರುದ್ದ ಬಿಜೆಪಿ – ಜೆಡಿಎಸ್‌ ಪ್ರತಿಭಟನೆ

ಕಪ್‌ ತುಳಿತ ಪ್ರಕರಣ

by Kundapur Xpress
Spread the love

ಬೆಂಗಳೂರು : ಬೆಂಗಳೂರು ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಅಮಾಯಕರ ಸಾವು ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ಹಾಗೂ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಶಾಸಕರು ಸೋಮವಾರ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಅಧಿವೇಶನದ ಮೊದಲ ದಿನವೇ ಬಿಜೆಪಿ-ಜೆಡಿಎಸ್ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ. ಸದನದೊಳಗೂ ನಾವು ಹೋರಾಡಲಿದ್ದೇವೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಪ್ರಕರಣದ ಜವಾಬ್ದಾರಿಯನ್ನು ಸಿಎಂ, ಡಿಸಿಎಂ ಹೊರಬೇಕು. ಜವಾಬ್ದಾರಿಯಿಂದ ನುಣುಚಿಕೊಳ್ಳಲು ಅಮಾಯಕ ಪೊಲೀಸ್‌ ಅಧಿಕಾರಿ ಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಹಿನ್ನೆಲೆಯಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ, ಉತ್ತರ ಕರ್ನಾ ಟಕದ ನೀರಾವರಿ ಸಮಸ್ಯೆ ಗಳಿಗೆ ಪರಿಹಾರ ದೊರೆಯುತ್ತಿಲ್ಲ, ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುತ್ತಿಲ್ಲ. ರಾಜ್ಯದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಆದರೂ ನೇಮಕಾತಿ ಮಾಡುತ್ತಿಲ್ಲ. ಇನ್ನೂ ಹಲವು ವಿಚಾರಗಳ ಸಂಬಂಧ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಿದ್ದೇವೆ. ಇಂದಿನ ಪ್ರತಿಭಟನೆ ಕೇವಲ ಸಾಂಕೇತಿಕ ಎಂದು ಹೇಳಿದರು

 

Related Articles

error: Content is protected !!