ಬೆಂಗಳೂರು : ವಿಧಾನಸಭೆಯಲ್ಲಿ ಅನುಚಿತ ವರ್ತನೆ ಆರೋಪದ ಮೇಲೆ 18 ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸೀಕರ್‌ಗೆ ನಿರ್ದೇಶಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ನಿಯೋಗ ಥಾವರ್‌ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿತು.
18 ಶಾಸಕರ ಅಮಾನತು ಪ್ರಜಾಪ್ರಭುತ್ವ ವಿರೋಧಿ ನಡೆ, ಶಾಸಕರ ಹಕ್ಕು ಗಳನ್ನು ಮೊಟಕುಗೊಳಿಸಲಾಗಿದೆ. ರಾಜ್ಯ ಪಾಲರು ಮಧ್ಯ ಪ್ರವೇಶಿಸಿ ಸಭಾಧ್ಯಕ್ಷರಿಗೆ ಅಮಾನತು ಹಿಂಪಡೆಯುವಂತೆ ಸೂಚಿಸಬೇಕು ಎಂದು ಕೋರಿದೆ.
ರಾಜ್ಯಪಾಲರಿಗೆ ಮನವಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಭಾಧ್ಯಕ್ಷರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು. ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಮಾಡುವ ಅಮಾನತಿನಲ್ಲಿ ಸಂವಿಧಾನ ವಿರೋಧಿ ನಡೆ ಅನುಸರಿಸಲಾಗಿದೆ. ಈ ಸಂಬಂಧ ಸಭಾಧ್ಯಕ್ಷರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದರು. ರಾಜ್ಯಪಾಲರನ್ನು ಭೇಟಿ ಮಾಡಿ ಮಧ್ಯಸ್ಥಿಕೆ ವಹಿ ಸಬೇಕು ಮತ್ತು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಲಾಗಿದೆ. ಅಮಾನತು ವಿಷಯದಲ್ಲಿ ಹಲವು ಬಾರಿ ಸಭಾಧ್ಯಕ್ಷರನ್ನು ಭೇಟಿ ಮಾಡಿ ಮನವಿ ಮಾಡಿದರೂ ಶಾಸಕರ ಅಮಾನತು ಹಿಂಪಡೆದಿಲ್ಲ ಎಂದು ಕಿಡಿಕಾರಿದರು

