Home » ಸರಕಾರದ ವಿರುದ್ದ ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ
 

ಸರಕಾರದ ವಿರುದ್ದ ಇಂದಿನಿಂದ ಬಿಜೆಪಿ ಜನಾಕ್ರೋಶ ಯಾತ್ರೆ

by Kundapur Xpress
Spread the love

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರಮುಖ ಪ್ರತಿಪಕ್ಷ ಬಿಜೆಪಿ ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ. ಈ ಯಾತ್ರೆ ಒಟ್ಟು ನಾಲ್ಕು ಹಂತಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗೆ ಳಲ್ಲಿ ಯಾತ್ರೆ ನಡೆಯಲಿದ್ದು ಮೇ 3ಕ್ಕೆ ಅಂತ್ಯಗೊಳ್ಳಲಿದೆ.

ಇಂದು ಸೋಮವಾರ ಮೈಸೂರಿನಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸೇರಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3.00 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಸಂಜೆ 4.00 ಗಂಟೆಗೆ ಕೇಂದ್ರ ಅಂಚೆ ಕಚೇರಿ ವೃತ್ತದಿಂದ ಗಾಂಧಿ ಚೌಕ್‌ವರೆಗೆ ಪಾದಯಾತ್ರೆ ಮೂಲಕ ಜನಾಕ್ರೋಶ ಯಾತ್ರೆ ನಡೆಯಲಿದೆ

 

Related Articles

error: Content is protected !!