Home » ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ
 

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ

ಬಿ ವೈ ವಿಜಯೇಂದ್ರ

by Kundapur Xpress
Spread the love

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಚ್ಚ ನ್ಯಾಯಾಲಯದ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸಿದೆ. ಹೈಕೋರ್ಟ್ ತೀರ್ಪಿನ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ನ್ಯಾಯಾಲಯ ತಿಳಿಸಿದೆ ಎಂದು ವಿಶ್ಲೇಷಿ ಸಿದರು.

ಹೈಕೋರ್ಟ್‌ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದಿದ್ದರು ಎಂದು ಟೀಕಿಸಿದರು. ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ದ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಮುಖ್ಯಮಂತ್ರಿಗಳ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ದ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು-ಮೈಸೂರು ಪಾದಯಾತ್ರೆ ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದೆವು. ರಾಜ್ಯದ ಮೂಲೆಮೂಲೆಯಿಂದ ಲಕ್ಷ ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಹೋರಾಟದಲ್ಲಿ ಭಾಗವಹಿಸಿದ್ದರು ಎಂದರು

   

Related Articles

error: Content is protected !!