Home ರಾಜ್ಯ ಸುದ್ದಿಚಳಿಗಾಲದ ಅಧಿವೇಶನದಲ್ಲಿ ನೂತನ ಮುಖ್ಯಮಂತ್ರಿ

ಚಳಿಗಾಲದ ಅಧಿವೇಶನದಲ್ಲಿ ನೂತನ ಮುಖ್ಯಮಂತ್ರಿ

ಬಿ ವೈ ವಿಜಯೇಂದ್ರ

by Kundapur Xpress

ಬೆಳಗಾವಿ : ಮುಡಾ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ನಿಶ್ಚಿತ  ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಬಹುಶಃ ನೂತನ ಮುಖ್ಯಮಂತ್ರಿ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಪರವಾಗಿದ್ದೇವೆ ಎಂದು ಹೇಳುವ ಕಾಂಗ್ರೆಸ್ ಪಕ್ಷದ ಸಚಿವರು,ಶಾಸಕರುರಹಸ್ಯ ಸಭೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮುಡಾ ಹಗರಣದ ಕಾರ್ಮೋಡ ಮುಖ್ಯಮಂತ್ರಿ ಕುರ್ಚಿಯನ್ನು ಆವರಿಸಿದೆ.ಶಾಸಕರು, ಸಚಿವರು ಸಿದ್ದರಾಮಯ್ಯ ಮನಸು ಗೆಲ್ಲುವ ಪ್ರಯತ್ನ ಮಾಡುತ್ತಿದ್ದಾರೆ ಎಂದ ಅವರು,ಪ್ರಾಯಶ್ಚಿತ್ತ ರೂಪವಾಗಿ ಸೈಟ್‌ಗಳನ್ನು ಸಿದ್ದರಾಮಯ್ಯ ವಾಪಸ್‌ ಕೊಟ್ಟಿದ್ದಾರೆ.ಹೀಗಾಗಿ,ಅವರ ಮಾತುಗಳಿಂದ ಅವರು ಎಷ್ಟು ಅಸಹಾಯಕರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

Related Articles