Home » ಬೆಲೆ ಎರಿಕೆ ವಿರುದ್ದ ಸಿಎಂ ನಿವಾಸಕ್ಕೆ ಬಿಜೆಪಿ ಮುತ್ತಿಗೆ
 

ಬೆಲೆ ಎರಿಕೆ ವಿರುದ್ದ ಸಿಎಂ ನಿವಾಸಕ್ಕೆ ಬಿಜೆಪಿ ಮುತ್ತಿಗೆ

ಯಡಿಯೂರಪ್ಪ ಭಾಗಿ

by Kundapur Xpress
Spread the love

ಬೆಂಗಳೂರು : ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿಯ ಬಳಿಕ ಗುರುವಾರ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದಕ್ಕೆ ಮುಂದಾದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಮಧ್ಯಾಹ್ನದಿಂದ ಗುರುವಾರ ಮಧ್ಯಾಹ್ನದವರೆಗೆ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಧರಣಿ ನಡೆಸಲಾಯಿತು. ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು.

ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಬೈರತಿ ಬಸವರಾಜ್, ಪ್ರಮುಖರಾದ ಸಿ.ಟಿ.ರವಿ, ಎಸ್.ಆರ್. ವಿಶ್ವನಾಥ್, ಭಾರತಿ ಶೆಟ್ಟಿ ಮುಂತಾದವರಲ್ಲದೆ ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

 

Related Articles

error: Content is protected !!