ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಬಿ.ನಾಗೇಂದ್ರ, ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ರಾಜ್ಯದ ಹಲವೆಡೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಹೊಸಪೇಟೆ, ಮಂಗಳೂರು, ತುಮಕೂರು, ಗದಗ, ಮೈಸೂರು, ಶಿವಮೊಗ್ಗ ಮತ್ತಿತರ ಕಡೆ ಬಿಜೆಯಿಂದ ಪ್ರತಿಭಟನೆ ನಡೆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಲಾಯಿತು.
ಪೊಲೀಸರು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜ ಅವರ ಮೇಲೆ ತರಾತುರಿಯಿಂದ ಪ್ರಕರಣ ದಾಖಲಿಸುತ್ತಾರೆ. ಕಂಕ ನಾಡಿ ನಮಾಜ್ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಹಾಕುತ್ತಾರೆ. ಆದರೆ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಹೆಸರಿದ್ದರೂ ಎಫ್ ಐ ಆರ್ ದಾಖಲಿಸುವ ಕೆಲಸ ಸರ್ಕಾರ ಮಾಡುತ್ತಿಲ್ಲ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಂಡ ಸರ್ಕಾರ, ಬಹುಕೋಟೆ ರುಪಾಯಿ ಲೂಟಿ ನಡೆದಿದ್ದರೂ ಸಚಿವರ ರಾಜೀನಾಮೆ ಪಡೆದಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.