Home » ಸಿದ್ದು ರಾಜೀನಾಮೆಗೆ ಮೈತಿ ಹೋರಾಟ
 

ಸಿದ್ದು ರಾಜೀನಾಮೆಗೆ ಮೈತಿ ಹೋರಾಟ

by Kundapur Xpress
Spread the love

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಬೀದಿಗಿಳಿದು ಆಗ್ರಹಿಸಿವೆ.

ಇತ್ತೀಚೆಗಷ್ಟೇ ಮುಡಾ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದ ಉಭಯ ಪಕ್ಷಗಳು ಇದೀಗ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜಂಟಿ ಪ್ರತಿಭಟನೆ ನಡೆಸಿವೆ.

ಸೋಮವಾರ ವಿಧಾನಸೌಧ, ವಿಕಾಸಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಮುಂಭಾಗ ಉಭಯ ಪಕ್ಷಗಳ ನಾಯಕರು ಧರಣಿ ನಡೆಸಿ, ಮುಖ್ಯಮಂತ್ರಿ ವಿರುದ್ದಘೋಷಣೆ ಕೂಗಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 

   

Related Articles

error: Content is protected !!