ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಕಾಂಗ್ರೆಸ್ ಪ್ರತಿಭಟನೆ ನೆಪದಲ್ಲಿ ಮಾಡಿರುವ ಅವಮಾನವನ್ನು ಖಂಡಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು