Home » ಬೆಂಗಳೂರಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ
 

ಬೆಂಗಳೂರಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ

by Kundapur Xpress
Spread the love

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಶಾಸಕರು, ಸಂಸದರು, ಮಾಜಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರ, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

 

Related Articles

error: Content is protected !!