ಗದಗ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಎನ್ನುವ ಚಟುವಟಿಕೆಗಳು ಕಾಂಗ್ರೆಸ್ ಪಕ್ಷದಲ್ಲಿ ಚುರುಕಾಗಿ ನಡೆಯುತ್ತಿವೆ. ಹೀಗಾಗಿ, ಸಿದ್ದರಾಮಯ್ಯ ಕೂಡ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.ನಗರದಲ್ಲಿ ಸೋಮವಾರ ಸುದ್ದಿಗಾರನ ಜತೆ ಅವರು ಮಾತನಾಡಿದರು.
ದಸರಾ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ವಿಜಯೇಂದ್ರ ಅವರು ಸರಿಯಾದ ಲೆಕ್ಕಾಚಾರದಲ್ಲಿಯೇ ಹೇಳಿದ್ದಾರೆ. ನನ್ನ ಪ್ರಕಾರ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆಂದು ಅಭಿಪ್ರಾಯಪಟ್ಟರು