ಬೆಂಗಳೂರು : ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ ಒಂದು ವೇಳೆ ಅರ್ಹರಾಗಿದ್ದು, ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ 24 ಗಂಟೆಯೊಳಗೆ ಬಿಪಿಎಲ್ ಕಾರ್ಡ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ 14 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದ್ದು ಈವರೆಗೆ 3.63 ಲಕ್ಷ ಕಾರ್ಡ್‌ಗಳು ರದ್ದಾಗಿವೆ ಎಂದಿದ್ದಾರೆ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಅವರು ಬಿಪಿಎಲ್ ಕಾರ್ಡ್ ನಲ್ಲೇ ಮುಂದುವರೆಯಲಿದ್ದಾರೆ. ಆದರೆ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ರದ್ದಾಗಲಿದ್ದು, ಅದು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆಯಾಗಲಿದೆ ಎಂದು ತಿಳಿಸಿದರು. ‘