Home » ಮೂರು ಕ್ಷೇತ್ರ ಗೆಲ್ಲಲು ಕಾಂಗ್ರೇಸ್‌ ರಣತಂತ್ರ
 

ಮೂರು ಕ್ಷೇತ್ರ ಗೆಲ್ಲಲು ಕಾಂಗ್ರೇಸ್‌ ರಣತಂತ್ರ

ಉಪ ಚುನಾವಣೆ

by Kundapur Xpress
Spread the love

 ಬೆಂಗಳೂರು  ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಉಪ ಚುನಾವಣೆ, ಜಾತಿಗಣತಿ, ಒಳ ಮೀಸಲಾತಿ ಹಾಗೂ ಪಂಚಮಸಾಲಿ ಮೀಸಲಾತಿ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಸಚಿವರು ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಿ ಪಕ್ಷವನ್ನು ಗೆಲ್ಲಿಸಬೇಕಿದೆ. ಪಕ್ಷ ಯಾವುದೇ ಅಭ್ಯರ್ಥಿಗೆ ಟಿಕೆಟ್ ನೀಡಿದರೂ ಗೆಲ್ಲಿಸಬೇಕು. ಬಿಜೆಪಿಯವರ ಸುಳ್ಳುಗಳನ್ನು ಬಯಲು ಮಾಡುವ ಜತೆಗೆ ಪಕ್ಷ ಹಾಗೂ ಸರ್ಕಾರವನ್ನು ಬಲವಾಗಿ ಸಮರ್ಥಿಸಿಕೊಳ್ಳ ಬೇಕು ಎಂದು ಸೂಚನೆ ನೀಡಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 30 ಶಾಸಕರು ಮತ್ತು 10 ಸಚಿವರ ನಿಯೋಜನೆಗೆ ಚರ್ಚಿಸಿದ್ದು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ. ಜತೆಗೆ ಮಾಜಿ ಶಾಸಕರು, ಪರಿಷತ್ ಸದಸ್ಯರು ಸಹ ಚುನಾವಣೆ ಕಣದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಲಾ ಗಿದೆ. ಶೀಘ್ರದಲ್ಲೇ ಜವಾಬ್ದಾರಿ ಹಂಚಿಕೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು

 

Related Articles

error: Content is protected !!