ಬೆಂಗಳೂರು : ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ಉಪ ಚುನಾವಣೆಯ ಕಾವು ಜೋರಾಗಿದ್ದು, ಗೆದ್ದೇ ತೀರಬೇಕೆಂಬ ಪಣ ತೊಟ್ಟಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟವೂ ತೀವ್ರ ಪೈಪೋಟಿ ನೀಡಿದೆ. ಉಪ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಸರ್ಕಾರ ಸ್ವತಃ ಸಿಎಂ, ಡಿಸಿಎಂ ಸೇರಿದಂತೆ ಇಡೀ ಸಂಪುಟವೇ ಬೀಡುಬಿಟ್ಟಿದೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೂ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್ ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ತನ್ನ ಬಲ ಸಾಬೀತುಪಡಿಸಲು ದೊಡ್ಡ ಮಟ್ಟದಲ್ಲಿ ಪಕ್ಷದ ಸೇನಾನಿಗಳನ್ನು ನಿಯೋಜಿಸಿದೆ. ಚುನಾವಣಾ ಕಾರ್ಮೋಡದಿಂದ ವಿಧಾನಸೌಧ ಖಾಲಿ ಖಾಲಿಯಾಗಿದ್ದು ಬೀಕೋ ಎನ್ನುತ್ತಿದೆ