ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಹುಬ್ಬಳ್ಳಿಯ ಗಲಭೆಕೋರರ ವಿರುದ್ಧದ ಕ್ರಿಮಿನಲ್ ಪ್ರಕರಣ ವಾಪಸ್ ಪಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ನಾಯಕರು ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸೋಮವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾ ಯಿತು. ಈ ವೇಳೆ ಪ್ರತಿಭಟನಾಕಾರರು ಗಲಭೆ ಕೋರರ ವಿರುದ್ಧ ಕ್ರಿಮಿನಲ್ ಪ್ರಕರಣ ಹಿಂಪಡೆಯುತ್ತಿರುವುದು ಖಂಡನೀಯ ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪ್ರತಿಭಟನೆ ನಡೆಸಿದ ಬಳಿಕ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಿಯೋಗವು ರಾಜಭವನಕ್ಕೆ ತೆರಳಿತು. ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಕ್ರಿಮಿನಲ್ಗಳ, ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವ ಕ್ರಮ ಸರಿಯಲ್ಲ. ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಸಲ್ಲಿಸಿತು