ಬೆಂಗಳೂರು : ಕಾಂಗ್ರೆಸ್‌ನಲ್ಲಿ ಸಿ ಎಂ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ನಾ ಮುಂದು, ತಾ ಮುಂದೆ ಎಂಬಂತೆ ಸಿಎಂ ಸ್ಥಾನದ ಆಕಾಂಕ್ಷಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನಾಯಕ ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಒಪ್ಪಿದರೆ ಮುಖ್ಯಮಂತ್ರಿ ಆಗುವೆ ಎನ್ನುವ ಹೇಳಿಕೆ ನೀಡಿದ ಬೆನ್ನಲ್ಲೆ ಸಚಿವ ಎಂ.ಬಿ ಪಾಟೀಲ ಕೂಡ ಸಿಎಂ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ನಡೆದಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿವೆ.
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಗಲು ಎಂ.ಬಿ. ಪಾಟೀಲ್‌ಗಿಂತ ಬಹಳ ಜನರು ಹಿರಿಯರಿದ್ದಾರೆ ಎಂದು ಶಿವಾನಂದ ಪಾಟೀಲ್ ನೀಡಿದ ಹೇಳಿಕೆಗೆ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ನನಗಿಂತ ಹಿರಿಯರಿದ್ದಾರೆ. ಆದರೆ ಹಿರಿತನ ಮಾತ್ರ ಮಾನದಂಡವಲ್ಲ ನಾನು ಕೂಡ ಮುಖ್ಯಮಂತ್ರಿ ಆಗುತ್ತೇನೆ ಎಂಬ ಅವರ ಹೇಳಿಕೆ ಗಮನ ಸೆಳೆದಿದೆ.
ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಸತೀಶ್ ಜಾರಕಿಹೊಳಿ ಅವರು ಸಹ ಮುಖ್ಯಮಂತ್ರಿ ರೇಸಿನಲ್ಲಿದ್ದಾರೆ