ಕುಂದಾಪ್ರ : ಕುಂದಾಪ್ರ ಕನ್ನಡ ದಿನಾಚರಣೆಗೆ ಎಂ ಸಿದ್ದರಾಮಯ್ಯ ಸಹಿತ ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಕಿರಣ್ ಕುಮಾರ್ ಕೊಡ್ಡಿ ಮತ್ಶು ಶಾಸಕ ಗುರುರಾಜ್ ಗಂಟಿಹೊಳಿ ಶುಭಾಶಯ ಕೋರಿದ್ದಾರೆ
ಕುಂದಾಪುರ ಕನ್ನಡ ಮಾತನಾಡುವ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ಬಾರ್ಕೂರು ಸಹಿತ ನಾಡಿನ ವಿವಿಧೆಡೆ ಆಷಾಢ ಅಮಾವಾಸ್ಯೆ ದಿನ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಹಲವು ಕಾರ್ಯಕ್ರಮಗಳು ನಡೆಯಿತು. ಇನ್ನೂ ಕೆಲವು ದಿನಗಳ ಕಾಲ ಈ ಆಚರಣೆ ಹಲವೆಡೆ ನಡೆಯಲಿದೆ.
ಬಾರ್ಕೂರು ಸಮೀಪದ ಯಡ್ತಾಡಿಯಲ್ಲಿ ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ವತಿಯಿಂದ ಸಿನೆಮಾ ನಟ ದಿ| ಸುನಿಲ್ ಅವರ ಮನೆಯಲ್ಲಿ ಕುಂದಾಪ್ರ ಕನ್ನಡ ದಿನಾಚರಣೆಯ ಅಂಗವಾಗಿ ಹೋರಿಗೆ ಯರ್ಥ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು, ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕುಂದಾಪುರದ ಬೋರ್ಡ್ ಹೈಸ್ಕೂಲಿನ ಕಲಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮ ಜರುಗಿತು ಕುಂದಾಪುರ ಬಂಟರ ಸಂಘದಲ್ಲಿ ಕುಂದಪ್ರಭ ಸಂಸ್ಥೆ ಸಹಯೋಗದಲ್ಲಿ ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ ರಚನೆ ಕುರಿತು ಸಮಾಲೋಚನೆ ಬಸ್ರೂರು ಬಿ ಅಪ್ಪಣ್ಣ ಹೆಗ್ಡೆಯವರ ನೇತೃತ್ವದಲ್ಲಿ ಜರುಗಿತು