Home » ರಾಜೀನಾಮೆ ಇಲ್ಲ – ಕಾನೂನು ಹೋರಾಟ
 

ರಾಜೀನಾಮೆ ಇಲ್ಲ – ಕಾನೂನು ಹೋರಾಟ

ಸಿ ಎಂ ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರಕ್ಕೆ ಈ ಸಿದ್ದರಾಮಯ್ಯನನ್ನ ಕಂಡರೆ ಭಯ. ಹೀಗಾಗಿ ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು, ಆಧಾರ ರಹಿತ ಪ್ರಕರಣದಲ್ಲಿ ನನ್ನ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡಿಸಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆ ಈ ಬಗ್ಗೆ ಕಾನೂನು ಹೋರಾಟ ಹಾಗೂ ಪಕ್ಷದ ವತಿಯಿಂದ ಬೀದಿಗಿಳಿದು ಹೋರಾಟ ನಡೆಸಲು ನಿರ್ಧರಿಸಿದ್ದೇವೆ. ಜತೆಗೆ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯಪಾಲರು ತಮ್ಮ ವಿರುದ್ದದ ಮುಡಾ ಪ್ರಕರಣ ಸಂಬಂಧ ಅಭಿಯೋಜನೆಗೆ ಅನುಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯಪಾಲರ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜನರಿಂದ ಚುನಾಯಿತವಾದ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರ ನಡೆಸಿದ್ದಾರೆ. ನನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟಿಸ್‌ ನೀಡಿದ್ದರು.

ರಾಜ್ಯಪಾಲರ ಈ ನಡೆಯನ್ನು ನಾವು ನಿರೀಕ್ಷಿಸಿದ್ದೆವು. ಇದು ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಸರ್ಕಾರವನ್ನು ಆತಂತ್ರ ನಡೆಸಲು ಹೂಡಿರುವ ಪಿತೂರಿ: ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ಹೀಗಾಗಿ ರಾಜೀನಾಮೆ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.

   

Related Articles

error: Content is protected !!