ಬೆಂಗಳೂರು : ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನಾ ಪ್ರತಿಜ್ಞಾವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆತ್ಮಸಾಕ್ಷಿ ನ್ಯಾಯಾಲಯ ಅತ್ಯುನ್ನತವಾದ ನ್ಯಾಯಾಲಯವಾಗಿದೆ. ಆದ್ದರಿಂದ ನಾವೆಲ್ಲರೂ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ಪ್ರಯತ್ನ ಮಾಡಬೇಕು. ಇವತ್ತು ಅನೇಕ ಜನರು ನ್ಯಾಯಾಲಯಗಳನ್ನು ಕಾನೂನುಗಳನ್ನು ಬಿಟ್ಟು ಅವರದ್ದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಹಾಗಾಗಿ ನಾವು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ಗೌರವ ನೀಡಿದಂತಾಗುತ್ತದೆ ಎಂದು ಹೇಳಿದರು.
ಕಾನೂನು ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಸಿಎಂ ಬಹಳ ಸುಂದರವಾದ ಮಾತು ಹೇಳಿದ್ದಾರೆ. ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತ ನ್ಯಾಯಾಲಯ ಇದೆ. ಅದೇ ಆತ್ಮಸಾಕ್ಷಿ ನ್ಯಾಯಾಲಯ ಎಂದು ಹೇಳಿದ್ದಾರೆ. ಇದು ಮಕ್ಕಳ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರಲಿದೆ ಎಂದು ತಿಳಿಸಿದ್ದಾರೆ. .