Home » ಜಾತಿ ಗಣತಿ ವರದಿ ಶೀಘ್ರ ಸಂಪುಟದಲ್ಲಿ ಮಂಡನೆ
 

ಜಾತಿ ಗಣತಿ ವರದಿ ಶೀಘ್ರ ಸಂಪುಟದಲ್ಲಿ ಮಂಡನೆ

ಸಿ ಎಂ ಸಿದ್ದರಾಮಯ್ಯ

by Kundapur Xpress
Spread the love

ಬೆಂಗಳೂರು : ಮಹತ್ವದ ವಿದ್ಯಮಾನವೊಂದರಲ್ಲಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದಾಗಿ ಬಹುಚರ್ಚಿತ ಜಾತಿಗಣತಿ ವರದಿ ಮಂಡನೆ ವಿಚಾರವು ಕುತೂಹಲಕಾರಿ ಘಟ್ಟ ತಲುಪಿದೆ.

ಸೋಮವಾರ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಸೇರಿ ಹಿಂದುಳಿದ ವರ್ಗಗಳ 30 ಮಂದಿ  ಜಾತಿಗಣತಿ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಇದು ಬರೀ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ ನಡೆದಿದೆ. ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಚರ್ಚಿಸುತ್ತೇವೆ. ವರದಿಗೆ ವಿರೋಧ ಮಾಡುವ ಪ್ರಶ್ನೆಯಿಲ್ಲ. ಎಲ್ಲರ ಅಭಿಪ್ರಾಯಗಳನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ’ ಎಂದು  ಸ್ಪಷ್ಟಪಡಿಸಿದರು. 

   

Related Articles

error: Content is protected !!