Home » ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆ
 

ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆ

ಪೊಲೀಸ್ ಸಂಸ್ಮರಣಾ ದಿನ 

by Kundapur Xpress
Spread the love

ಬೆಂಗಳೂರು : ರಾಜ್ಯದಲ್ಲಿ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗ ಳನ್ನು ತೆರೆಯುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಅವರು, ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸರ್ಕಾರ ಸಹಕಾರ ನೀಡಲಿದೆ

ಪೊಲೀಸ್ ಸಿಬ್ಬಂ ದಿಯ ಹಿತ ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2 ಸಾವಿರ ಕೋಟಿ ರು. ನೀಡಿದ್ದೇವೆ. 200 ಕೋಟಿ ರು. ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದು ಹೇಳಿದರು

   

Related Articles

error: Content is protected !!