99
ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳೂ ಉತ್ತಮವಾಗಿ ನಡೆಯುತ್ತಿವೆ. ಆದರೆ, ಈ ವಿಚಾರವಾಗಿ ಬಿಜೆಪಿಯವರು ಬರೀ ಸುಳ್ಳು ಹೇಳುತ್ತಿದ್ದಾರೆ. ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಲ್ಲಿ ಭಾನುವಾರ ಆಯೋಜಿಸಿದ್ದ ‘ಸರ್ಕಾರದ 2 ವರ್ಷದ ಮೊದಲ ಸಾಧನಾ ಸಮಾವೇಶ ಮತ್ತು ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ’ ನೆರವೇರಿಸಿದೆ ಬಳಿಕ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿ ಮಾತನಾಡಿದರು.
ಈವರೆಗೆ ಗ್ಯಾರಂಟಿಯಿಂದ 80,000 ಕೋಟಿ ರು. ಜನರ ಜೇಬಿಗೆ ಹಾಕಿದ್ದೇವೆ.ಈ ಬಾರಿಯ ಬಜೆಟ್‌ನಲ್ಲೂ 50,000 ಕೋಟಿ ರು. ಮೀಸಲಿಟ್ಟಿದ್ದೇವೆ. ಇದರಿಂದ ಜನರಲ್ಲಿ ಕೊಳ್ಳುವ ಸಾಮರ್ಥ್ಯ ಹೆಚ್ಚಿದೆ ಎಂದರು

