ಬೆಂಗಳೂರು : ಲೋಕಸಭೆ ಚುನಾವಣಾ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬೊಕ್ಕಸಕ್ಕೆ ಆದಾಯ ತರುವ 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ್ದಾರೆ. ಈ ವೇಳೆ ತೆರಿಗೆ, ರಾಜಸ್ವ ಸಂಗ್ರಹ ಹೆಚ್ಚಳ, ಸೋರಿಕೆ ತಡೆಗೆ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ ತಿಂಗಳ ಒಳಗೆ ಇದರಲ್ಲಿ ನಿಗದಿತ ಗುರಿ ತಲುಪದಿದ್ದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.